Mysore
31
broken clouds

Social Media

ಭಾನುವಾರ, 22 ಮಾರ್ಚ್ 2026
Light
Dark

ನಾಳೆ ರಾಷ್ಟ್ರವ್ಯಾಪಿ ಎಲ್ಲಾ ಬ್ಯಾಂಕ್‌ಗಳು ಬಂದ್:‌ ಯಾವುದೇ ವಹಿವಾಟು ನಡೆಯೋಲ್ಲ

All banks closed tomorrow No transactions will take place

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿವೆ.

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಯಲಿದ್ದು, ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ಬ್ಯಾಂಕ್ ಸೇವೆಗಳನ್ನು ಪಡೆಯಲು ಕಷ್ಟಪಡಬೇಕಾಗಬಹುದು.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು, ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ.

ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ಭಾರತ್ ಬಂದ್‍ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.

ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ.

Tags:
error: Content is protected !!