All banks closed tomorrow No transactions will take place
ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಿವೆ.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಮುಷ್ಕರ ನಡೆಯಲಿದ್ದು, ಇದರಿಂದಾಗಿ ದೇಶದಾದ್ಯಂತ ಬ್ಯಾಂಕ್ ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ. ಗ್ರಾಹಕರು ಬ್ಯಾಂಕ್ ಸೇವೆಗಳನ್ನು ಪಡೆಯಲು ಕಷ್ಟಪಡಬೇಕಾಗಬಹುದು.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಗಳು ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರವನ್ನು ತಪ್ಪಿಸಲು ಬ್ಯಾಂಕ್ ನೌಕರರ ಸಂಘಟನೆಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದ್ದು, ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ಕೊಟ್ಟಿವೆ.
ದೇಶದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ಭಾರತ್ ಬಂದ್‍ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.
ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…