ಹೊಸದಿಲ್ಲಿ: ಕೆನಡಾದಲ್ಲಿ ಖಲಿಸ್ತಾನ್ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ.
ಖಲಿಸ್ತಾನ್ ಪ್ರತ್ಯೇಕವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಾಗೂ ಕೆನಡಾ ದೇಶದ ಅಪರಾಧ ಚಟುವಟಿಕೆಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಮೀಲಾಗಿದ್ದಾರೆ ಎಂಬ ಆರೋಪಕ್ಕೆ ಬಲವಾದ ಸಾಕ್ಷಿ ಪುರಾವೆಗಳು ಇರಲಿಲ್ಲ ಎಂದು ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ ಈಚೆಗೆ ಒಪ್ಪಿಕೊಂಡಿದ್ದರು. ಆದರೆ ಗುಪ್ತಚರ ಮಾಹಿತಿ ಮಾತ್ರ ಇತ್ತು ಎಂದು ಅವರು ಹೇಳಿದ್ದರು.
ವಿದೇಶಿ ಶಕ್ತಿಗಳ ಹಸ್ತಕ್ಷೇಪ ಕುರಿತ ಇತ್ತೀಚಿನ ವಿಚಾರಣೆಗೆ ಹಾಜರಾಗಿದ್ದ ಟ್ರುಡೊ, ಭಾರತದ ರಾಜತಾಂತ್ರಿಕರು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕುರಿತು ಭಿನ್ನಾಭಿಪ್ರಾಯ ಹೊಂದಿರುವ ಕೆನಡಾ ಪ್ರಜೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆ ಮಾಹಿತಿಯನ್ನು ಅವರು ಭಾರತ ಸರ್ಕಾರದ ಅತ್ಯುನ್ನತ ಹಂತಗಳಲ್ಲಿ ಇರುವವರಿಗೆ ಹಾಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಂಹತ ಕ್ರಿಮಿನಲ್ ಸಂಘಟನೆಗಳಿಗೆ ರವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…