Mysore
26
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ದೆಹಲಿ ಸಿಎಂ ಅತಿಶಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ: ಸರ್ಕಾರಿ ನೌಕಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದೆಹಲಿ ಸಿಎಂ ಅತಿಶಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.4) ಗೋವಿಂದ ಪುರಿ ಪೊಲೀಸ್‌ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದೇವೆ. ಅಲ್ಲದೇ ಈ ಕುರಿತು ಅಧಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನೂ ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ(ಕಲ್ಯಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿ) ಅತಿಶಿ ಅವರು, ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

Tags: