ದೇಶ- ವಿದೇಶ

‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದೆ.

ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್‍ ಈಗಾಗಲೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದ್ದು, ಅಕ್ಟೋಬರ್ 02ರಂದು ‘ಕಾಂತಾರ – ಚಾಪ್ಟರ್ 1’ ಚಿತ್ರವು ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಜೊತೆಗೆ ಟ್ರೇಲರ್‍ ಚಿತ್ರಮಂದರಗಳಲ್ಲೂ ಬಿಡುಗಡೆಯಾಗಿವೆ.

ಇದನ್ನು ಓದಿ : ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದ್ದು ತೆರೆಗೆ ಬರಲು ಸಿದ್ಧವಾಗಿದೆ. ಕೋಮಲ್ ಕುಮಾರ್ ಇದುವರೆಗೂ ಕಾಣಿಸಿಕೊಂಡಿರದ ಪಾತ್ರವನ್ನು ‘ಕೋಣ’ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಕಾಮಿಡಿ, ಆಕ್ಷನ್, ಸಸ್ಪೆನ್ಸ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಇಲ್ಲಿ ಕೋಮಲ್ ಹೊಸ ಅವತಾರದಲ್ಲಿ ಕಾಣಿಸುತ್ತಾರೆ.

ಈ ಚಿತ್ರದಲ್ಲಿ ಕೋಮಲ್‍ಗೆ ನಾಯಕಿಯಾಗಿ ತನಿಷಾ ಕುಪ್ಪಂಡ ನಟಿಸುತ್ತಿದ್ದು, ಮಿಕ್ಕಂತೆ ಕೀರ್ತಿರಾಜ್, ನಮ್ರತಾ ಗೌಡ, ವಿನಯ್ ಗೌಡ, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ಜಗ್ಗಪ್ಪ ಮುಂತಾದವರು ನಟಿಸಿದ್ದಾರೆ.

ಈ ಹಿಂದೆ ಜಗ್ಗೇಶ್ ನಟನೆಯ ‘8 MM’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ಹರಿಕೃಷ್ಣ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್ ಮತ್ತು ರವಿಕಿರಣ್ ಈ ಚಿತ್ರವನ್ನು ನಿರ್ಮಿಸಿದ್ದು, ಶಶಾಂಕ್ ಶೇಷಗಿರಿ ಸಂಗೀತ ಮತ್ತು ವೀನಸ್ ನಾಗರಾಜ ಮೂರ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

2 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago