ವಾಷಿಂಗ್ಟನ್: ದಕ್ಷಿಣ ಕೆರೊಲಿನಾದ ಕರಾವಳಿುಂಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕದ ಫೈಟರ್ ಜೆಟ್ ಶನಿವಾರ ಹೊಡೆದುರುಳಿಸಿದೆ ಎಂದು ಪೆಂಟಗನ್ (ಅಮೆರಿಕ ರಕ್ಷಣಾ ಇಲಾಖೆಯ ಕೇಂದ್ರ ಕಚೇರಿ) ತಿಳಿಸಿದೆ.
ಇದು ಚೀನಾದಿಂದ ಆಗಿರುವ ಅಮೆರಿಕ ಸಾರ್ವಭೌಮತೆಯ ಉಲ್ಲಂಘನೆ ಎಂದು ಪೆಂಟಗನ್ ಹೇಳಿದೆ. ಅಮೆರಿಕ ವಾಯು, ಜಲಪ್ರದೇಶದಲ್ಲಿ ಹಾರಾಡುತ್ತಿದ್ದ ಬಲೂನ್ ಅನ್ನು ಹೊಡೆದುಹಾಕಿದ ಯುದ್ಧ ವಿಮಾನದ ಪೈಲಟ್‌ಗಳನ್ನು ದೇಶದ ಅಧ್ಯಕ್ಷ ಜೋ ಬೈಡನ್ ಅವರು ಅಭಿನಂದಿಸಿದರು.
ಫೈಟರ್ ಜೆಟ್‌ಗಳು ಬಲೂನ್ ಅನ್ನು ಯಶಸ್ವಿಯಾಗಿ ಹೊಡೆದುಹಾಕಿವೆ. ನಮ್ಮ ತಂಡವನ್ನು ನಾನು ಅಭಿನಂದಿಸುತ್ತೇನೆ ಎಂದು ಬೈಡನ್ ಅವರು ಮೇರಿಲ್ಯಾಂಡ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಈ ಕಾರ್ಯಾಚರಣೆಗಾಗಿ ದೇಶದ ಆಗ್ನೇಯ ಭಾಗದ 3 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಾರ್ಯಾಚರಣೆ ಎಂದು ದೇಶದ ವಾಯುಯಾನ ಇಲಾಖೆ ಹೇಳಿತ್ತು. ಸದ್ಯ ಹೊಡೆದುರುಳಿಸಲಾಗಿರುವ ಬಲೂಲ್ ಮತ್ತು ಅದರೊಳಗಿನ ಸಾಧನಗಳನ್ನು ಪತ್ತೆ ಮಾಡಲು ಕಾರ್ಯಾಚರಣೆ ಆರಂಭವಾಗಿದೆ ಎಂದು ಪೆಂಟಗನ್ ತಿಳಿಸಿದೆ.
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…