ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆಹಿಡಿದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಅವರು, ವೆನೆಜುವೆಲಾ ಮತ್ತು ಅದರ ಅಧ್ಯಕ್ಷನ ವಿರುದ್ಧ ದೊಡ್ಡ ಪ್ರಮಾಣದ ದಾಳಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅಮೆರಿಕದ ಕಾನೂನು ಜಾರಿ ಸಂಸ್ಥೆಗಳ ಜತೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮಡುರೊ ಮತ್ತು ಅವರ ಪತ್ನಿಯನ್ನು ವಶಕ್ಕೆ ಪಡೆದು ದೇಶದಿಂದ ಹೊರಗೆ ಕಳುಹಿಸಲಾಯಿತು ಎಂದು ಹೇಳಿದ್ದಾರೆ.
ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಸರಣಿ ಸ್ಛೋಟಗಳು ಸಂಭವಿಸಿದ ಸುಮಾರು ಎರಡು ಗಂಟೆಗಳ ನಂತರ ಟ್ರಂಪ್ ಈ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಹೆಚ್ಚಿನ ವಿವರಗಳನ್ನು ಫ್ಲೋರಿಡಾದಲ್ಲಿರುವ ಮಾರ್-ಎ-ಲಾಗೊದಲ್ಲಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸುವುದಾಗಿ ಹೇಳಿದ್ದಾರೆ.
ಕ್ಯಾರಕಾಸ್ ಮೇಲೆ ಅಮೆರಿಕ ಸರಣಿ ದಾಳಿ
ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಅಮೆರಿಕ ಸರಣಿ ದಾಳಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಶನಿವಾರ ಮುಂಜಾನೆ ರಾಜಧಾನಿ ಕ್ಯಾರಕಾಸ್ ಮೇಲೆ ನಡೆದ ದಾಳಿಯಲ್ಲಿ ಅಮೆರಿಕದ ಪಡೆಗಳು ಭಾಗಿಯಾಗಿರುವುದನ್ನು ಟ್ರಂಪ್ ಆಡಳಿತಾಧಿಕಾರಿಗಳು ದೃಢಪಡಿಸಿದ್ದಾರೆ.
ಸರಣಿ ಸ್ಛೋಟಗಳು ಸಂಭವಿಸಿದ್ದು, ರಾಜಧಾನಿ ಕ್ಯಾರಕಾಸ್‌ನಲ್ಲಿ ವಿದ್ಯುತ್ ಕಡಿತಗೊಂಡಿದೆ. ಹಲವು ಯುದ್ಧ ವಿಮಾನಗಳನ್ನು ಬಳಸಿ ಅಮೆರಿಕ ದಾಳಿ ನಡೆಸಿದೆ. ನಗರದ ದಕ್ಷಿಣ ಭಾಗದಲ್ಲಿ ಪ್ರಮುಖ ಸೇನಾ ನೆಲೆಯ ಬಳಿಯೂ ದಟ್ಟವಾದ ಹೊಗೆ ಆವರಿಸಿದೆ. ಈ ಸ್ಛೋಟದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…