Mysore
16
scattered clouds

Social Media

ಬುಧವಾರ, 21 ಜನವರಿ 2026
Light
Dark

ಧರ್ಮಸ್ಥಳ ಪ್ರಕರಣ: ಅಮಿತ್‌ ಶಾ ಭೇಟಿಯಾದ ಸ್ವಾಮೀಜಿಗಳ ನಿಯೋಗ

amith sha

ನವದೆಹಲಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಮಠಗಳ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ವಜ್ರ ದೇಹಿ ಮಠದ ಸ್ವಾಮೀಜಿ ನೇತೃತ್ವದ ವಿವಿಧ ಮಠಗಳ ಸನಾತನ ಸಂತ ಸ್ವಾಮೀಜಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದೆ. ಈ ವೇಳೆ 8 ಮಂದಿ ಸ್ವಾಮೀಜಿಗಳು ಉಪಸ್ಥಿತರಿದ್ದರು.

ಇದನ್ನು ಓದಿ;ಎಸ್‌ಐಟಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಯೂಟ್ಯೂಬರ್‌ ಅಭಿಷೇಕ್‌

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಷಡ್ಯಂತ್ರ ಹೊರಬರಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಪ್ರಕರಣ ಬಾಹುಬಲಿ ಬೆಟ್ಟ ತಲುಪಿರುವುದಕ್ಕೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಮಾತ್ರವಲ್ಲ. ಬೇರೆ ಬೇರೆ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಶಬರಿಮಲೆ, ತಿರುಪತಿ ಬಳಿಕ ಈಗ ಧರ್ಮಸ್ಥಳವನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

Tags:
error: Content is protected !!