amith sha
ನವದೆಹಲಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಮಠಗಳ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ವಜ್ರ ದೇಹಿ ಮಠದ ಸ್ವಾಮೀಜಿ ನೇತೃತ್ವದ ವಿವಿಧ ಮಠಗಳ ಸನಾತನ ಸಂತ ಸ್ವಾಮೀಜಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಈ ವೇಳೆ 8 ಮಂದಿ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಇದನ್ನು ಓದಿ;ಎಸ್‌ಐಟಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಷಡ್ಯಂತ್ರ ಹೊರಬರಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.
ಧರ್ಮಸ್ಥಳ ಪ್ರಕರಣ ಬಾಹುಬಲಿ ಬೆಟ್ಟ ತಲುಪಿರುವುದಕ್ಕೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಮಾತ್ರವಲ್ಲ. ಬೇರೆ ಬೇರೆ ಕ್ಷೇತ್ರಗಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಶಬರಿಮಲೆ, ತಿರುಪತಿ ಬಳಿಕ ಈಗ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಧರ್ಮಸ್ಥಳ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…