ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು.
ಈ ಪ್ರಸ್ತಾವನೆಯು ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಈಗಿರುವ 543 ರಿಂದ 850ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದ್ದು, ಸಂಸತ್ತಿನಲ್ಲಿ ಭಾರೀ ಸಂಚಲನ ಮೂಡಿಸಿದೆ.
ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮದ ಅನುಷ್ಠಾನವನ್ನು ಈ ಮರುವಿಂಗಡಣೆ ಪ್ರಕ್ರಿಯೆಯೊಂದಿಗೆ ಜೋಡಿಸಲಾಗಿದ್ದು, 2029ರ ಸಾರ್ವತ್ರಿಕ ಚುನಾವಣೆಯ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಆದರೆ ಜನಸಂಖ್ಯೆ ಆಧಾರಿತ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಾತಿನಿಧ್ಯದ ಅನ್ಯಾಯವಾಗಬಹುದು ಎಂಬ ಆತಂಕವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿದ್ದು, ಸದನದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ.
ಈ ಬಗ್ಗೆ ಮಾತನಾಡಿರುವ ಸಚಿವರು, ದಕ್ಷಿಣ ಭಾರತದ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣ ಯಶಸ್ವಿಯಾಗಿರುವುದರಿಂದ, ಕ್ಷೇತ್ರ ಮರುವಿಂಗಡಣೆಯಿಂದ ಆ ರಾಜ್ಯಗಳಿಗೆ ರಾಜಕೀಯವಾಗಿ ಯಾವುದೇ ಅನ್ಯಾಯವಾಗುವುದಿಲ್ಲ. ಸೀಟುಗಳ ಹೆಚ್ಚಳದ ವೇಳೆ ಎಲ್ಲಾ ರಾಜ್ಯಗಳಿಗೂ ಸಮಾನವಾಗಿ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…