ದೇಶ- ವಿದೇಶ

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಿಜೆಪಿ ಧ್ವನಿ ನೀಡುತ್ತಿರುವ ಬಂಗಾಳದ ಜನರ ಚಾರ್ಜ್‌ಶೀಟ್‌ ಎಂದು ಬಣ್ಣಿಸಿದ್ದಾರೆ.

ಮುಂಬರುವ ಚುನಾವಣೆಗಳು ರಾಜ್ಯಕ್ಕೆ ಮಾತ್ರವಲ್ಲ. ದೇಶಕ್ಕೂ ನಿರ್ಣಾಯಕವಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ.. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಭಯ ಬೇಕಾ ಅಥವಾ ಭರವಸೆ ಬೇಕಾ ಎಂಬುದನ್ನು ಬಂಗಾಳದ ಜನ ನಿರ್ಧರಿಸಬೇಕು ಎಂದು ಕರೆ ನೀಡಿದರು.

ಇನ್ನು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೆಲವೊಮ್ಮೆ ಅವರಿಗೆ ಕಾಲು ಮುರಿಯುತ್ತೆ. ಕೆಲವೊಮ್ಮೆ ತಲೆಗೆ ಬ್ಯಾಂಡೇಜ್‌ ಬರುತ್ತೆ. ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಚುನಾವಣಾ ಆಯೋಗವನ್ನು ನಿಂದಿಸುತ್ತಾರೆ. ಹೀಗೇ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

2 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

3 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

3 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

3 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

3 hours ago