Mysore
26
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಪ್ರಧಾನಿ ಮೋದಿ ಭೇಟಿಯಾದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು

ನವದೆಹಲಿ: ಆಂಧ್ರಪ್ರದೇಶ ಸಿಎಂ ಎನ್.ಚಂದ್ರಬಾಬು ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನೀಡಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಪ್ರಸ್ತಾವನೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದಿಟ್ಟು, ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶವು ಬಲಿಷ್ಠ ರಾಜ್ಯವಾಗಿ ಮತ್ತೆ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವನ್ನು ಸಿಎಂ ಚಂದ್ರಬಾಬು ನಾಯ್ಡು ವ್ಯಕ್ತಪಡಿಸಿದರು.

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ರಚನಾತ್ಮಕ ಭೇಟಿ ನಡೆಯಿತು. ಆಂಧ್ರಪ್ರದೇಶ ಅಭಿವೃದ್ಧಿ ಹಾಗೂ ಕಲ್ಯಾಣದ ಬಗ್ಗೆ ಪ್ರಮುಖ ಚರ್ಚೆಗಳು ನಡೆಯಿತು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಆಂಧ್ರಪ್ರದೇಶ ಮತ್ತೆ ಶಕ್ತಿಶಾಲಿಯಾಗಿ ಹೊರಹೊಮ್ಮಲಿದೆ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದರ ಜೊತೆ ಸಿಎಂ ಚಂದ್ರಬಾಬು ನಾಯ್ಡು ಅವರು, ಕೇಂದ್ರದ ಹಲವು ಸಚಿವರನ್ನೂ ಭೇಟಿ ಮಾಡಿದ್ದಾರೆ. ಸಚಿವ ನಿತಿನ್‌ ಗಡ್ಕರಿ, ಪಿಯುಷ್‌ ಗೋಯಲ್‌, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನೂ ಸಹ ಭೇಟಿ ಮಾಡಿದ್ದಾರೆ.

Tags: