ಅಮರಾವತಿ: ದೇಶಾದ್ಯಂತ ವಕ್ಫ್ ಮಸೂದೆ ಹಾಗೂ ವಕ್ಫ್ ವಿವಾದಗಳ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ.
ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್‌ನ್ನು ವಜಾಗೊಳಿಸಿದೆ.
ಈ ಬಗ್ಗೆ ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ.ಫಾರೂಕ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಕಳೆದ ವರ್ಷ ಅಕ್ಟೋಬರ್.21ರಂದು ಹಿಂದಿನ ಸರ್ಕಾರವು ಮಂಡಳಿತ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯು ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ ಎಂದು ಹೇಳಿದ್ದಾರೆ.
ಹಿಂದಿನ ಸರ್ಕಾರದ ಕ್ರಮಗಳಿಂದಾಗಿ ವಕ್ಫ್ ಬೋರ್ಡ್ ಎದುರಿಸಿದ ಕಾನೂನು ಮತ್ತು ಆಡಳಿತಾತ್ಮಕ ಸವಾಲುಗಳನ್ನು ಎತ್ತಿ ಹಿಡಿದ ಫಾರೂಕ್ ಅವರು, ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.