Mysore
26
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಅಣ್ಣಾ ಹಜಾರೆ ಕಿಡಿ

ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ ಹಜಾರೆ ಅವರು, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದರು.

ನಾನು ಈ ವಿಚಾರವನ್ನು ಕೇಜ್ರಿವಾಲ್‌ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಸೋತಿದ್ದಾರೆ ಎಂದು ದೂರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು. ಆದರೆ ಅವರು ಈ ವಿಚಾರದ ಕಡೆಗೆ ತಲೆ ಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರೂ ಅದು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ ಎಂದರು.

 

Tags:
error: Content is protected !!