ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾ ಹಜಾರೆ ಅವರು, ಅಭ್ಯರ್ಥಿಯಲ್ಲಿ ಒಳ್ಳೆಯ ನಡವಳಿಕೆ, ಯೋಚನೆ, ಆಪಾದನೆ ರಹಿತ ಜೀವನ ಹಾಗೂ ತ್ಯಾಗ ಮನೋಭಾವವಿದ್ದರೆ ಮತದಾರರು ಅಂತಹವರ ಮೇಲೆ ನಂಬಿಕೆಯಿಡುತ್ತಾರೆ ಎಂದರು.
ನಾನು ಈ ವಿಚಾರವನ್ನು ಕೇಜ್ರಿವಾಲ್ ಬಳಿಯೂ ಹೇಳಿದ್ದೆ. ಆದರೆ ಅವರು ಇದರ ಬಗ್ಗೆ ಗಮನಕೊಡಲಿಲ್ಲ. ಬದಲಾಗಿ ಅವರಲ್ಲಿ ಹಣದ ಹೊಳೆಯಿದ್ದಿದ್ದರಿಂದ ಮದ್ಯದ ಕಡೆಗೆ ಗಮನಹರಿಸಿದರು. ಇದರಿಂದಲೇ ಅವರು ಸೋತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಆಪಾದನೆಗಳು ಬರುತ್ತದೆ. ಅದು ಸುಳ್ಳು ಎಂದು ನಾವು ಸಾಬೀತು ಮಾಡಬೇಕು. ಆದರೆ ಅವರು ಈ ವಿಚಾರದ ಕಡೆಗೆ ತಲೆ ಹಾಕಲೇ ಇಲ್ಲ. ಸತ್ಯ ಯಾವತ್ತಿದ್ದರೂ ಅದು ಸತ್ಯವಾಗಿರುತ್ತದೆ. ಆದ್ದರಿಂದ ನಾನು ಆ ಪಕ್ಷದಿಂದ ದೂರವಿರಬೇಕು ಎಂದು ನಿರ್ಧರಿಸಿದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…