ದೇಶ- ವಿದೇಶ

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಫೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು, ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ಗೆ ಬಂದ ಅವರು, ತಮ್ಮ ಮುಂಬರುವ ರಾಜಕೀಯ ನಡೆ ಹಾಗೂ ಹೊಸ ಆಂದೋಲನದ ನೀಲನಕ್ಷೆಯನ್ನು ಹಂಚಿಕೊಂಡಿದ್ದಾರೆ. ತಮ್ಮ ಹೊಸ ರಾಜಕೀಯ ಆಂದೋಲನಕ್ಕೆ ನಾವು ಜನರು ಎಂದು ಹೆಸರಿಡಲಾಗುವುದು ಎಂದು ಪ್ರಕಟಿಸಿದ ಅವರು, ಈ ವೇದಿಕೆಯು ಸಂಪೂರ್ಣವಾಗಿ ನಾಗರಿಕರ ಕೇಂದ್ರಿತವಾಗಿರಲಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕಳೆದ 18 ತಿಂಗಳುಗಳಿಂದ ಹಲವು ವೈಚಾರಿಕ ಮತ್ತು ಕಾರ್ಯವೈಖರಿಯ ವಿಚಾರಗಳಲ್ಲಿ ನನಗೆ ಬಿಜೆಪಿ ನಾಯಕತ್ವದ ಜೊತೆಗೆ ಭಿನ್ನಾಭಿಪ್ರಾಯಗಳಿದ್ದವು. ನಾನು 2025ರ ಡಿಸೆಂಬರ್‌ನಲ್ಲೇ ಪಕ್ಷ ಬಿಡುವ ಇಚ್ಛೆಯನ್ನು ಹೈಕಮಾಂಡ್‌ಗೆ ತಿಳಿಸಿದ್ದೆ. ಆದರೆ ಚುನಾವಣೆ ಮುಗಿಯುವವರೆಗೆ ಜವಾಬ್ದಾರಿ ನಿಭಾಯಿಸುವಂತೆ ಅವರು ಕೋರಿದ್ದರಿಂದ ನಾನು ಮುಂದುವರಿದಿದ್ದೆ,” ಎಂದು ಬಹಿರಂಗಪಡಿಸಿದರು.

ತಮ್ಮ ಮಾತಿನಲ್ಲಿ ಕರ್ನಾಟಕದಲ್ಲಿ ತಾವು ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ಅಣ್ಣಾಮಲೈ ಭಾವನಾತ್ಮಕವಾಗಿ ಸ್ಮರಿಸಿಕೊಂಡರು. “ಯಾವ ಕುರ್ಚಿಯೂ, ಅಧಿಕಾರವೂ ಯಾರಿಗೂ ಶಾಶ್ವತವಲ್ಲ” ಎಂಬ ತತ್ವವನ್ನು ತಾವು ಪೊಲೀಸ್ ಸೇವೆಯಲ್ಲಿದ್ದಾಗಿನಿಂದಲೂ ನಂಬಿಕೊಂಡು ಬಂದಿರುವುದಾಗಿ ಅವರು ಮಾರ್ಮಿಕವಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago