ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.
ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ಮಕ್ಕಳ್ ಶಕ್ತಿ ಇಯಕ್ಕಂ ಎಂಬ ಹೊಸ ಜನಪರ ಚಳುವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಅಣ್ಣಾಮಲೈ ಅವರು ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
2021ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಪ್ರಮುಖ ಕಾರಣರಾಗಿದ್ದರು.
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…
ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…