ದೇಶ- ವಿದೇಶ

K.Annamalai : ನಡುರಸ್ತೆಲಿ ಶರ್ಟ್‌ ಬಿಚ್ಚಿ ಚಾಟಿಯಿಂದ ಬಾರಿಸಿಕೊಂಡ ಅಣ್ಣಾಮಲೈ

ಚನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಬೀದಿಗಿಳಿದು ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಎಲ್ಲರಿಗೂ ಶಾಕ್‌ ಕೊಟ್ಟಿದ್ದಾರೆ.

ಹೌದು…ಅಣ್ಣಾಮಲೈ ಅವರು ಇಂದು ತಮ್ಮ ನಿವಾಸದ ಎದುರು ಛಡಿಏಟು ಬಾರಿಸಿಕೊಂಡು ಪ್ರತಿಭಟನೆ ಮಾಡಿರುವ ವಿಡಿಯೋ ವೈರಲ್‌ ಆಗಿದೆ.

ಹಸಿರು ಮುಂಡು ಧರಿಸಿ, ಶರ್ಟ್ ರಹಿತ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ಮಗೆ ತಾವೇ ಹೊಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?, ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ ಮತ್ತು ಶೇಮ್ ಆನ್ ಯೂ ಎಂಬ ಘೋಷಣೆಗಳ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.

ಅಣ್ಣಾಮಲೈ ಅವರನ್ನು ತಡೆಯಲು ಬೆಂಬಲಿಗರು ಧಾವಿಸುವ ಮುನ್ನವೇ ಅವರು ಸುಮಾರು ಎಂಟು ಬಾರಿ ಚಾಟಿ ಯಲ್ಲಿ ಹೊಡೆದುಕೊಂಡಿದ್ದರು. ಸ್ವಯಂ ಚಾಟಿ ಬೀಸಿದ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಯ ಮಾರ್ಗಗಳು ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.

ನಮನ್ನು ನಾವೇ ಹೊಡೆದುಕೊಳ್ಳುವುದು, ನಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮನ್ನು ನಾವು ಹಾಕಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವುದು ಒಂದು ಟಿಪ್ಪಿಂಗ್ ಪಾಯಿಂಟ್ ಮಾತ್ರ ಎಂದು ಅವರು ಹೇಳಿದ್ದಾರೆ.

ನನ್ನ ಅನೇಕ ಪೂರ್ವಜರು ಈ ಮಾರ್ಗದಲ್ಲಿ ನಡೆದರು ಮತ್ತು ನಾನು ಕೂಡ ಅದನ್ನು ಆರಿಸಿಕೊಂಡಿದ್ದೇನೆ. ಇದು ಉನ್ನತ ಶಕ್ತಿಗೆ ಶರಣಾಗುವ, ದೇವರಿಗೆ ಶರಣಾಗುವ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯಸ್ಥರು ಸೇರಿಸಿದರು.

ತಮಿಳುನಾಡಿನಲ್ಲಿರುವ ಡಿಎಂಕೆ ಸರ್ಕಾರದಿಂದ ಜನರಿಗೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸರ್ಕಾರ ಹೋಗುವವರೆಗೆ ತಾವು ಕಾಲಿಗೆ ಚಪ್ಪಲಿ ತೊಡುವುದಿಲ್ಲ ಎಂದು ಅವರು  ಘೋಷಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago