ದೇಶ- ವಿದೇಶ

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. 57 ದಿನಗಳ ಕಾಲ ನಡೆಯುವ ಈ ಯಾತ್ರೆಯು ಆಗಸ್ಟ್ 28, ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು.

ಏಪ್ರಿಲ್.15ರಿಂದ ನೋಂದಣಿ: ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್.15ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ದೇಶಾದ್ಯಂತ ಎ&ಏ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯಸ್ ಬ್ಯಾಂಕ್‍ನ 554 ಶಾಖೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಪ್ರತಿ ಪರವಾನಗಿಗೆ 150 ಶುಲ್ಕವಿದೆ. ಅರ್ಜಿದಾರರು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಪ್ರಯಾಣದ ದಿನಾಂಕದಂತಹ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಕಡ್ಡಾಯ ಆರೋಗ್ಯ ಪ್ರಮಾಣಪತ್ರ (ಎಪ್ರಿಲ್ 8 ಅಥವಾ ನಂತರ ದಿನಾಂಕದ್ದು) ಸಲ್ಲಿಸಬೇಕು. ಇದರಲ್ಲಿ ಉಸಿರಾಟದ ತೊಂದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಸ್ತಮಾ, ಹೃದಯ ಕಾಯಿಲೆ, ಕೀಲುನೋವು, ಪಾಶ್ವವಾಯು ಇತ್ಯಾದಿ ವಿವರಗಳನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

43 mins ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

2 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

2 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

3 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

4 hours ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

4 hours ago