ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ.
ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. 57 ದಿನಗಳ ಕಾಲ ನಡೆಯುವ ಈ ಯಾತ್ರೆಯು ಆಗಸ್ಟ್ 28, ರಕ್ಷಾ ಬಂಧನದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು.
ಏಪ್ರಿಲ್.15ರಿಂದ ನೋಂದಣಿ: ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್.15ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ದೇಶಾದ್ಯಂತ ಎ&ಏ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯಸ್ ಬ್ಯಾಂಕ್‍ನ 554 ಶಾಖೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ. ಪ್ರತಿ ಪರವಾನಗಿಗೆ 150 ಶುಲ್ಕವಿದೆ. ಅರ್ಜಿದಾರರು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಪ್ರಯಾಣದ ದಿನಾಂಕದಂತಹ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.
ಕಡ್ಡಾಯ ಆರೋಗ್ಯ ಪ್ರಮಾಣಪತ್ರ (ಎಪ್ರಿಲ್ 8 ಅಥವಾ ನಂತರ ದಿನಾಂಕದ್ದು) ಸಲ್ಲಿಸಬೇಕು. ಇದರಲ್ಲಿ ಉಸಿರಾಟದ ತೊಂದರೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಸ್ತಮಾ, ಹೃದಯ ಕಾಯಿಲೆ, ಕೀಲುನೋವು, ಪಾಶ್ವವಾಯು ಇತ್ಯಾದಿ ವಿವರಗಳನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…