Mysore
26
few clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದು ಸರ್ಕಾರವು 3000 ಬೆಲೆಯ ಫಾಸ್ಟ್‌ ಟ್ಯಾಗ್‌ ಆಧಾರಿತ ವಾರ್ಷಿಕ ಪಾಸ್‌ನ್ನು ಪರಿಚಯಲಿಸಲಿದೆ ಎಂದು ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 3 ಸಾವಿರ ರೂಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್.‌15ರಿಂದ ಇದು ಜಾರಿಗೆ ಬರಲಿದೆ.

ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ. ಈ ಪಾಸ್‌ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ.

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್‌ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!