ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ.
ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನು ಗ್ಯಾರೇಜ್‌ನೊಳಗೆ ಸುಟ್ಟು ಹಾಕಲಾಗಿದೆ. ಇದು ಪೂರ್ವ ನಿಯೋಜಿತ ಹತ್ಯೆಯ ಆರೋಪಗಳನ್ನು ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಹೊಸ ಆತಂಕ ಕಳವಳಗಳನ್ನು ಹುಟ್ಟುಹಾಕಿದೆ.
ಈ ಘಟನೆ ನರಸಿಂಗ್ಡಿ ಪೊಲೀಸ್ ಲೈನ್ಸ್ ಪಕ್ಕದಲ್ಲಿರುವ ಮಸೀದಿ ಮಾರುಕಟ್ಟೆ ಪ್ರದೇಶದ ಬಳಿ ನಡೆದಿದೆ. ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯ ಮೂಲಗಳ ಪ್ರಕಾರ ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ದಾಳಿ ನಡೆದಿದೆ. ದುಷ್ಕರ್ಮಿಗಳು ಅಂಗಡಿಯ ಶಟರ್‌ಗೆ ಹೊರಗಿನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಬೆಂಕಿ ವೇಗವಾಗಿ ಒಳಗೆ ಹರಡಿತು.
ಈ ವೇಳೆ ಗ್ಯಾರೇಜ್ ಒಳಗಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಕುಟುಂಬವು ಇದನ್ನು ಪೂರ್ವ ನಿಯೋಜಿತ ಎಂದು ಆರೋಪಿಸಲಾಗಿದೆ.





