Mysore
21
overcast clouds

Social Media

ಶುಕ್ರವಾರ, 30 ಅಕ್ಟೋಬರ್ 2026
Light
Dark

ಅರ್ನಬ್ ಬೆನ್ನಲ್ಲೇ ಮತ್ತೊಂದು ಆತಂಕ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!

ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ.

ದಕ್ಷಿಣ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ–ವಾಯವ್ಯ ದಿಕ್ಕಿನಲ್ಲಿ ಚಲಿಸಿ, ಅಕ್ಟೋಬರ್‌ 31ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಖಿನ್ನತೆಯಾಗಿ ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬಳಿಕದ ಎರಡು ದಿನಗಳಲ್ಲಿ ಮತ್ತಷ್ಟು ತೀವ್ರಗೊಂಡು ಆಂಧ್ರಪ್ರದೇಶದ ಕರಾವಳಿಯತ್ತ ಚಲಿಸುವ ಸಾಧ್ಯತೆಯಿದೆ. ಇದರ ನಡುವೆ ಅಂಡಮಾನ್–ನಿಕೋಬಾರ್ ಪ್ರದೇಶದ ಕೆಲವು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

ಆದರೆ, ಈ ವ್ಯವಸ್ಥೆ ಚಂಡಮಾರುತವಾಗಿ ರೂಪುಗೊಳ್ಳಲಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಮುಂದಿನ ಬೆಳವಣಿಗೆಗಳ ಬಗ್ಗೆ ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆ ಗಮನಿಸುವುದು ಅಗತ್ಯ.

Tags:
error: Content is protected !!