ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್‌ಎಲ್‌ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-C6 ರಾಕೆಟ್ ಮೂಲಕ EOS-N1 ಅನ್ವೇಷಾ ಉಪಗ್ರಹ ಸೇರಿದಂತೆ 16 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಡಿಆರ್‌ಡಿಓ ಅಭಿವೃದ್ಧಿಪಡಿಸಿದ ಈ ಹೈಪರ್‌ಸ್ಟೆಕ್ಟ್ರಲ್ ಭೂ-ವೀಕ್ಷಣಾ ಉಪಗ್ರಹವು ಕಣ್ಗಾವಲು ಮತ್ತು ರಕ್ಷಣಾ ಉದ್ದೇಶಗಳಿಗೆ ಅತ್ಯಂತ ಪ್ರಮುಖವಾಗಿದೆ. ಸಾಮಾನ್ಯ ಉಪಗ್ರಹಗಳಿಂದ ಭಿನ್ನವಾಗಿರುವ ಅನ್ವೇಷಾ, ವಸ್ತುಗಳ ಬಣ್ಣ ಮಾತ್ರವಲ್ಲದೇ ಅವುಗಳ ಸ್ಟೆಕ್ಟ್ರಲ್ ಸಿಗ್ನೇಚರ್ ಅನ್ನು ಗುರುತಿಸುವ ಸಾಮರ್ಥ್ಯ ಹೊಂದಿದೆ. ರಕ್ಷಣೆಯ ಹೊರತಾಗಿ ಕೃಷಿ, ಮಣ್ಣಿನ ತೇವಾಂಶ, ಮಾಲಿನ್ಯ ಮೇಲ್ವಿಚಾರಣೆ ಹಾಗೂ ಖನಿಜ ಸಂಪನ್ಮೂಲವನ್ನು ಗುರುತಿಸುವಲ್ಲಿಯೂ ಈ ಉಪಗ್ರಹ ಬಳಕೆಯಾಗಲಿದೆ.
ಈ ಮೂಲಕ ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದು, ಭೂವೀಕ್ಷಣಾ ಉಪಗ್ರಹಗಳನ್ನು ನಭಕ್ಕೆ ಹಾರಿಸಿದೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…