ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಹೇಳಿದೆ.
ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆ ಎತ್ತುವಂತಿಲ್ಲ. ಅವುಗಳನ್ನು ರಕ್ಷಿಸಲು ಹೋಗಬಾರದು ಎಂದು ಆದೇಶ ಹೊರಡಿಸಿದೆ.