Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಭಾರತದಿಂದ ಮತ್ತೊಬ್ಬ ಪಾಕ್‌ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ

ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ.

ಈ ಕುರಿತು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದೆ.

ಇನ್ನು ಕಳೆದ ಒಂದು ವಾರದಲ್ಲಿ ಎರಡನೇ ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಲಾಗುತ್ತಿದೆ. ಈ ಹಿಂದೆ ಮೇ.13ರಂದು ಇದೇ ರೀತಿಯ ಬೇಹುಗಾರಿಕೆ ಆರೋಪದ ಮೇಲೆ ಭಾರತ, ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯೊಬ್ಬರನ್ನು ಹೊರಹಾಕಿತ್ತು.

Tags:
error: Content is protected !!