Mysore
30
broken clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

KRS Dam

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ, ಅಂದರೆ CWRC, ಸೂಚನೆ ನೀಡಿದೆ.

ನಿತ್ಯ 3,000 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಈ ಆದೇಶದಿಂದ ರಾಜ್ಯದಲ್ಲಿ ಮತ್ತೆ ಕಾವೇರಿ ನೀರು ಹಂಚಿಕೆ ವಿಚಾರ ಚರ್ಚೆಗೆ ಬಂದಿದೆ.

ಈಗಾಗಲೇ ಮಳೆ ಕೊರತೆ ಹಾಗೂ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಆತಂಕವಿರುವ ಸಂದರ್ಭದಲ್ಲಿ, ತಮಿಳುನಾಡಿಗೆ ನೀರು ಹರಿಸುವ ಸೂಚನೆ ಕರ್ನಾಟಕದ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಕಾವೇರಿ ನೀರು ನಿರ್ವಹಣೆ ಮತ್ತು ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಸರ್ಕಾರ ಮುಂದಿನ ಕ್ರಮ ಏನು ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ಕಾವೇರಿ ನೀರಿನ ವಿಚಾರದಲ್ಲಿ CWRC ಆದೇಶಕ್ಕೆ ಕರ್ನಾಟಕದ ಪ್ರತಿಕ್ರಿಯೆ ಏನು? ಎಂಬ ಪ್ರಶ್ನೆ ಮೂಡಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

 

Tags:
error: Content is protected !!