Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

UGC-NET ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್‌ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯುಜಿಸಿ ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಲಿದೆ. ಪ್ರಸಕ್ತ ಸಾಲಿನ ಎರಡನೇ ಆವೃತ್ತಿಯ ಪರೀಕ್ಷೆಗೆ ಈಗ ಅರ್ಜಿ ಸ್ವೀಕಾರ ಆರಂಭಿಸಿದೆ. ಪರೀಕ್ಷೆಯನ್ನು ಎನ್‌ಟಿಎ(ನ್ಯಾಷಿನಲ್‌ ಟೆಸ್ಟಿಂಗ್‌ ಏಜೆನ್ಸಿ) 2025ರ ಜನವರಿ ಮಾಹೆಯಲ್ಲಿ ನಡೆಸಲು ದಿನಾಂಕ ನಿಗದಿ ಪಡಿಸಿದೆ.

ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆಗಳಿಸಿದ ಅಭ್ಯರ್ಥಿಗಳು ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌, ಪದವಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪ್ರವೇಶಕ್ಕೂ ಅರ್ಹತೆ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಆರಂಭ: 19-11-2014
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11-12-2024
ಅರ್ಜಿಯಲ್ಲಿನ ಮಾಹಿತಿಗಳ ತಿದ್ದುಪಡಿ: ಡಿಸೆಂಬರ್‌ 12-13, 2024
ಯುಜಿಸಿ ಎನ್‌ಇಟಿ ಡಿಸೆಂಬರ್‌ ಆವೃತ್ತಿ ಪರೀಕ್ಷೆ: 2025ರ ಜನವರಿ 1 ರಿಂದ 19ರವರೆಗೆ

Tags: