ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ(ಯುಜಿಸಿ)ವು 2024ನೇ ಸಾಲಿನ ಡಿಸೆಂಬರ್ ಆವೃತ್ತಿಯ ಯುಜಿಸಿ-ಎನ್‌ಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಯುಜಿಸಿ ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಲಿದೆ. ಪ್ರಸಕ್ತ ಸಾಲಿನ ಎರಡನೇ ಆವೃತ್ತಿಯ ಪರೀಕ್ಷೆಗೆ ಈಗ ಅರ್ಜಿ ಸ್ವೀಕಾರ ಆರಂಭಿಸಿದೆ. ಪರೀಕ್ಷೆಯನ್ನು ಎನ್‌ಟಿಎ(ನ್ಯಾಷಿನಲ್ ಟೆಸ್ಟಿಂಗ್ ಏಜೆನ್ಸಿ) 2025ರ ಜನವರಿ ಮಾಹೆಯಲ್ಲಿ ನಡೆಸಲು ದಿನಾಂಕ ನಿಗದಿ ಪಡಿಸಿದೆ.
ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹತೆಗಳಿಸಿದ ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋಶಿಪ್, ಪದವಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪ್ರವೇಶಕ್ಕೂ ಅರ್ಹತೆ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಆರಂಭ: 19-11-2014
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11-12-2024
ಅರ್ಜಿಯಲ್ಲಿನ ಮಾಹಿತಿಗಳ ತಿದ್ದುಪಡಿ: ಡಿಸೆಂಬರ್ 12-13, 2024
ಯುಜಿಸಿ ಎನ್‌ಇಟಿ ಡಿಸೆಂಬರ್ ಆವೃತ್ತಿ ಪರೀಕ್ಷೆ: 2025ರ ಜನವರಿ 1 ರಿಂದ 19ರವರೆಗೆ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…