ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನವಾಗಿದೆ.
ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದು, ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಹೀನಾಯ ಸೋಲಿನ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಜನಾದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ. ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಜನರು ಅವರಿಗೆ ಮತ ಹಾಕಿದ ಎಲ್ಲಾ ಭರವಸೆಯನ್ನು ಅವರು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಅಂತೆಯೇ, ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಈ ಚುನಾವಣಾ ಫಲಿತಾಂಶವನ್ನು ನಾವು ನಿರೀಕ್ಷಿಸಿರಲಿಲ್ಲ. ತಮ್ಮ ಪಕ್ಷವು ಎಂದಿಗೂ ಅಧಿಕಾರಕ್ಕಾಗಿ ರಾಜಕೀಯದಲ್ಲಿರಲಿಲ್ಲ. ಜನರ ಸೇವೆಯೇ ನಮ್ಮ ಪಕ್ಷದ ಮುಖ್ಯ ಧ್ಯೇಯೋದ್ದೇಶವಾಗಿತ್ತು. ಜನರಿಗೆ ಸೇವೆ ಸಲ್ಲಿಸುವುದನ್ನು ನಮ್ಮ ಪಕ್ಷ ಮುಂದುವರಿಸುತ್ತದೆ. ರಚನಾತ್ಮಕ ವಿರೋಧ ಪಕ್ಷದ ಪಾತ್ರವನ್ನು ವಹಿಸುವುದಲ್ಲದೇ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…