ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ನಿಯೋಜಿತ ಸಿಎಂ ಆತಿಶಿ ಸೇರಿದಂತೆ ಅವರ ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ರಾಜಭವನಕ್ಕೆ ಆಗಮಿಸಿದ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ತದನಂತರದಲ್ಲಿ ಆತಿಶಿ ಅವರು ಸಕ್ಸೆನಾ ಅವರನ್ನು ಭೇಟಿ ಮಾಡಿ ದೆಹಲಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.
ಆತಿಶಿ ಅವರು ಸಿಎಂ ಸ್ಥಾನ ಅಲಂಕರಿಸುತ್ತಿರುವ ಅತ್ಯಂತ ಕಿರಿಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದು, ದೆಹಲಿ ಸಿಎಂ ಆಗುತ್ತಿರುವ ಮೂರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.





