ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.
ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ ಸೌಲಭ್ಯಗಳನ್ನು ಮತ್ತು ಭದ್ರತೆಯನ್ನು ತ್ಯಜಿಸಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಆಪ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಾಮಾಣಿಕತೆ ಮತ್ತು ತ್ಯಾಗ ಮನೋಭಾವ ಹೊಂದಿರುವ ಕೇಜ್ರಿವಾಲ್ ತಮ್ಮ ಸಿಎಂ ನಿವಾಸ ಹಾಗೂ ತಮಗೆ ಸಿಕ್ಕಿರುವ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ತ್ಯಜಿಸುತ್ತಾರೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಮಾತನಾಡಿದ ಆಪ್ ಸಂಸದ ಸಂಜಯ್ ಸಿಂಗ್ ಅವರು, ಮುಂದಿನ ದಿನಗಳಲ್ಲಿ ಕೇಜ್ರಿವಾಲ್ ಅವರಿಗೆ ಜನ ಹೆಚ್ಚಿನ ಬಹುಮತದೊಂದಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಇನ್ನೊಂದು ವಾರದೊಳಗೆ ತಮ್ಮ ಮನೆಯನ್ನು ಖಾಲಿ ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…