Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ: ಇಬ್ಬರು ಯೋಧರು ಹುತಾತ್ಮ

ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ.

ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು, ಕಾಂಡ್ವಾ-ಬಸಂತ್‌ ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್‌ ವಾಹನ ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ.

ಈ ವಾಹನವು ಹಲವಾರು ಸಿಆರ್‌ಪಿಎಫ್‌ನ ಹಲವಾರು ಧೈರ್ಯಶಾಲಿ ಯೋಧರನ್ನು ಹೊತ್ತೊಯ್ಯುತ್ತಿತ್ತು. ನಾನು ಇದೀಗ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನನಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.

Tags:
error: Content is protected !!