11 ಯೋಧರಿಗೆ ಗಂಭೀರ ಗಾಯ
ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ, ಕನಿಷ್ಠ 10 ಸೈನಿಕರು ಸಾವನ್ನಪ್ಪಿದ್ದು, 11 ಯೋಧರು ಗಾಯಗೊಂಡಿದ್ದಾರೆ.
ಒಟ್ಟು 21 ಸೈನಿಕರು ಪ್ರಯಾಣಿಸುತ್ತಿದ್ದ ವಾಹನವೊಂದು ರಸ್ತೆಯಿಂದ 200 ಅಡಿ ಆಳದ ಕಣಿವೆಗೆ ಜಾರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ 11 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಸೇನೆ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಾಳು ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ನೆರವಾದರು. ಸಣ್ಣಪುಟ್ಟ ಗಾಯಗಳಾಗಿರುವ ಓರ್ವ ಸೈನಿಕನಿಗೆ ಭದೇರ್ವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭದೇರ್ವಾ ಬ್ಲಾಕ್ ವೈದ್ಯಕೀಯ ಅಽಕಾರಿ (ಬಿಎಂಒ) ಡಾ. ವರ್ಷಾ ಶರ್ಮಾ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆಯ ಹಿರಿಯ ಅಧಿಕಾರಿಗಳು ಭದೇರ್ವಾ ಉಪ-ಜಿಲ್ಲಾ ಆಸ್ಪತ್ರೆಗೆ ತಲುಪಿದ್ದು, ಗಾಯಗೊಂಡ ಸೈನಿಕರ ಚಿಕಿತ್ಸೆ ಮತ್ತು ಉನ್ನತ ಸೌಲಭ್ಯಗಳಿಗೆ ಸ್ಥಳಾಂತರದ ಮೇಲ್ವಿಚಾರಣೆ ನಡೆಸಿದ್ದಾರೆ.
ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರಿಗೆ ಸಹಾಯ ಮಾಡಲು ಜಿಎಂಸಿ ದೋಡಾದಿಂದ ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯರು ಮತ್ತು ಅರೆವೈದ್ಯರ ತಂಡವನ್ನು ಕರೆಸಿ ಸ್ಥಳದಲ್ಲಿ ನಿಯೋಜಿಸಲಾಗಿದೆ.
ಆರಂಭದಲ್ಲಿ ಮೂವರು ಯೋಧರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, 13 ಮಂದಿಯನ್ನು ಸಮೀಪದ ಸೇನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಕೆಲವು ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ವಿಮಾನದಲ್ಲಿ ರವಾನಿಸಲಾಗಿದೆ. ಬಳಿಕ ಇನ್ನೂ ಏಳು ಸಿಬ್ಬಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…