Mysore
25
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ಸ್ವ ಇಚ್ಛೆಯಿಂದ ಗ್ಯಾರಂಟಿ ಯೋಜನೆ ಬಿಟ್ಟುಕೊಡಲು ವ್ಯವಸ್ಥೆ: ರೇವಣ್ಣ

ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

ಕಾರಾವಾರದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ನಮಗೆ ಬೇಡ ಎಂದು ಕೆಲವು ಮಹಿಳೆಯರು ಹೇಳಿದ್ದರು. ಆದರೆ, ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

Tags:
error: Content is protected !!