Mysore
27
scattered clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಬಂಧನ ವಾರೆಂಟ್‌

ನ್ಯೂಯಾರ್ಕ್‌: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್‌ ಜಾರಿ ಮಾಡಿದೆ.

ಗೌತಮ್‌ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್‌ ಹೊರಡಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ರಮುಖವಾಗಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.

ಗೌತಮ್‌ ಅದಾನಿ ಜೊತೆಗೆ ಹಲವರು ಆರೋಪಿತರಲ್ಲಿ ಸೇರ್ಪಡೆಯಾಗಿದ್ದು, ಅವರ ವಿರುದ್ಧವೂ ಬಂಧನ ವಾರೆಂಟ್‌ ಜಾರಿಗೊಳಿಸಲಾಗಿದೆ.

ಗೌತಮ್‌ ಅದಾನಿ, ಸೈರಿಲ್‌ ಕೆಬನೆಸ್‌, ಸಾಗರ್‌ ಅದಾನಿ, ವಿನೀತ್‌ ಜೈನ್‌, ರಂಜಿತ್‌ ಗುಪ್ತ, ಸೌರಭ್‌ ಅಗರ್ವಾಲ್‌, ದೀಪಕ್‌ ಮಲ್ಹೋತ್ರಾ, ರೂಪೇಶ್‌ ಅಗರ್ವಾಲ್‌ ಅವರ ಹೆಸರು ಕೂಡ ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿದೆ.

ಅದಾನಿ ಗ್ರೀನ್‌ ಎನರ್ಜಿ ಮತ್ತು ಅಜುರೆ ಪವರ್‌ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

 

Tags: