Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಗೌರವ ಡಾಕ್ಟರೇಟ್ ಸ್ವೀಕರಿಸಿದ ಶಿಲ್ಪಿ ಅರುಣ್ ಯೋಗಿರಾಜ್‌

ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ.

ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶದಲ್ಲಿ ಗಮನ ಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜಸ್ಥಾನದ ರಾಜ್ಯಪಾಲ ಹರಿಬಾಬು ಬಾಗಡೆ ಅವರು ಅರುಣ್ ಯೋಗಿರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಸಂತಸದಿಂದ ಅರುಣ್ ಯೋಗಿರಾಜ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.

 

Tags: