ನವದೆಹಲಿ: ದೆಹಲಿಯ ದೇವಾಲಯಗಳಲ್ಲಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆಯಲ್ಲಿ ಪ್ರತಿ ತಿಂಗಳು 18 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಮ್ ಆದ್ಮಿ ಪಕ್ಷ ಗೆದ್ದರೆ, ದೆಹಲಿಯ ದೇವಸ್ಥಾನಗಳ ಅರ್ಚಕರು ಹಾಗೂ ಗುರುದ್ವಾರ ಸಾಹಿಬ್‌ನ ಗ್ರಂಥಿಗಳಿಗೆ ಪ್ರತಿ ತಿಂಗಳು 18 ಸಾವಿರ ರೂ.ಗಳಷ್ಟು ಧನಸಹಾಯ ಮಾಡಲಾಗುತ್ತದೆ ಎಂದು ಘೋಷಸಿದ್ದಾರೆ.
ಈ ಯೋಜನೆಯ ಪ್ರಮುಖ ಉದ್ದೇಶವೆಂದರೆ ಸಮಾಜಕ್ಕೆ ಅರ್ಚಕರ ಆಧ್ಯಾತ್ಮಿಕ ಕೊಡುಗೆ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಅವರ ಪ್ರಯತ್ನಗಳಿಗೆ ಸಲ್ಲಿಸುವ ಗೌರವವಾಗಿದೆ. ಹೀಗಾಗಿ ಬಿಜೆಪಿ ಪಕ್ಷದವರು ಇದನ್ನು ತಡೆಯುವ ಪ್ರಯತ್ನ ಮಾಡಬೇಡಿ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ 2025ರ ಫೆಬ್ರವರಿ ತಿಂಗಳಿನಲ್ಲಿ ವಿಧಾನ ಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಹಿಂದೂ ದೇವಸ್ಥಾನ ಹಾಗೂ ಗುರುದ್ವಾರಗಳಲ್ಲಿ ಪೂಜೆ ಮಾಡುವವರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆ ಹೆಸರಿನಲ್ಲಿ ಸಹಾಯಧನದ ಭರವಸೆ ನೀಡಿದ್ದಾರೆ.





