ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂಭಾಗದಲ್ಲಿ ಬಂಧಿಸಿದ ಸಿಬಿಐ ನಡೆ ವಿರೋಧಿಸಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಎಎಪಿ ಕಾನೂನು ತಜ್ಞರ ತಂಡ ಮಾಹಿತಿ ನೀಡಿರುವುದಾಗಿ ʼಲೈವ್‌ಲಾʼ ಸುದ್ದಿ ಹಂಚಿಕೊಂಡಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನ ಮಾಡಿದ್ದ ಸಿಬಿಐ ನಡೆ ಬಗ್ಗೆ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಿದ್ದ ಕೇಜ್ರಿವಾಲ್ ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್ ಬಳಿ ಸಮರ್ಪಕ ಕಾರಗಳಿಲ್ಲ ಎಂದು ಮಖ್ಯ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಹೇಳಿದ್ದರು.
ಜುಲೈ 17 ರಂದು ಅರ್ಜಿ ವಜಾಗೊಳಿಸಿದ ಕೋರ್ಟ್, ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಅವಕಾಶ ನೀಡಿತ್ತು. ಅದರಂತೆ ಈಗ ತಮ್ಮ ವಿರುದ್ಧ ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತ ತಿಹಾರ್ ಜೈಲಿನಲ್ಲಿ ನ್ಯಾಯಂಗ ಬಂಧನವಾಗಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ತನ್ನ ವಶಕ್ಕೆ ಪಡೆದಿತ್ತು.





