ದೇಶ- ವಿದೇಶ

ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಮೊರೆಹೋದ ಸಿಎಂ ಕೇಜ್ರಿವಾಲ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯದ ಮುಂಭಾಗದಲ್ಲಿ ಬಂಧಿಸಿದ ಸಿಬಿಐ ನಡೆ ವಿರೋಧಿಸಿ ಸಿಎಂ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಿಬಿಐ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವುದಾಗಿ ಎಎಪಿ ಕಾನೂನು ತಜ್ಞರ ತಂಡ ಮಾಹಿತಿ ನೀಡಿರುವುದಾಗಿ ʼಲೈವ್‌ಲಾʼ ಸುದ್ದಿ ಹಂಚಿಕೊಂಡಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನ ಮಾಡಿದ್ದ ಸಿಬಿಐ ನಡೆ ಬಗ್ಗೆ ಈ ಹಿಂದೆ ಹೈಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ ಅವರ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿತ್ತು. ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್‌ ಬಳಿ ಸಮರ್ಪಕ ಕಾರಗಳಿಲ್ಲ ಎಂದು ಮಖ್ಯ ನ್ಯಾಯಮೂರ್ತಿ ನೀನಾ ಬನ್ಸಾಲ್‌ ಕೃಷ್ಣ ಹೇಳಿದ್ದರು.

ಜುಲೈ 17 ರಂದು ಅರ್ಜಿ ವಜಾಗೊಳಿಸಿದ ಕೋರ್ಟ್‌, ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಅವಕಾಶ ನೀಡಿತ್ತು. ಅದರಂತೆ ಈಗ ತಮ್ಮ ವಿರುದ್ಧ ಸಿಬಿಐ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತ ತಿಹಾರ್‌ ಜೈಲಿನಲ್ಲಿ ನ್ಯಾಯಂಗ ಬಂಧನವಾಗಿದ್ದ ಕೇಜ್ರಿವಾಲ್‌ ಅವರನ್ನು ಜೂನ್‌ 26 ರಂದು ಸಿಬಿಐ ತನ್ನ ವಶಕ್ಕೆ ಪಡೆದಿತ್ತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

1 min ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

19 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

30 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

55 mins ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

1 hour ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

1 hour ago