ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದಲೇ ಬಂಧಿಸಿ ಸಿಬಿಐ ತನ್ನ ಕಷ್ಟಡಿಗೆ ಪಡೆದಿದೆ.
ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿಗೆ ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಂಗಳವಾರ ಸಿಬಿಐ ತನ್ನ ವಶಕ್ಕೆ ಪಡೆದಿದ್ದು, ತಿಹಾರ್ ಜೈಲಿನಿಂದಲೇ ಅವರನ್ನು ಬಂಧಿಸಿ ತನ್ನ ವಶಕ್ಕೆ ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಒಂದು ದಿನದ ಮೊದಲೇ ಈ ಘಟನೆ ನಡೆದಿದೆ. ಇನ್ನು ಇಂದು ಬೆಳಗ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯದಾದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.