ದೇಶ- ವಿದೇಶ

ಜೈಲ್‌ನಿಂದಲೇ ಬಂಧನಕ್ಕೊಳಗಾದ ಅರವಿಂದ್‌ ಕ್ರೇಜಿವಾಲ್‌ !

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿನಿಂದಲೇ ಬಂಧಿಸಿ ಸಿಬಿಐ ತನ್ನ ಕಷ್ಟಡಿಗೆ ಪಡೆದಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್‌ ಜೈಲಿಗೆ ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮಂಗಳವಾರ ಸಿಬಿಐ  ತನ್ನ ವಶಕ್ಕೆ ಪಡೆದಿದ್ದು, ತಿಹಾರ್‌ ಜೈಲಿನಿಂದಲೇ ಅವರನ್ನು ಬಂಧಿಸಿ ತನ್ನ ವಶಕ್ಕೆ ಪಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ವಿಚಾರಣೆಗೆ ನಿಗದಿಪಡಿಸುವ ಒಂದು ದಿನದ ಮೊದಲೇ ಈ ಘಟನೆ ನಡೆದಿದೆ. ಇನ್ನು ಇಂದು ಬೆಳಗ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯದಾದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

9 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

32 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

46 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

58 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago