ನವದೆಹಲಿ: ಇಡಿ (ಜಾರಿ ನಿರ್ದೇಶನಾಲಯ) ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಪ್ರಜಾಫ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಒಂದು ಮನವಿ ಸಲ್ಲಿಸಿತ್ತು.
ಅರವಿಂದ್ ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟದ್ದು ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರಪತಿ ಆಳ್ವಿಕೆ ಅಥವಾ ರಾಜ್ಯಪಾಲರ ಆಳ್ವಿಕೆಯನ್ನು ನ್ಯಾಯಾಲಯವು ಹೇರಿರುವ ಯಾವುದೇ ಪುರ್ವನಿದರ್ಶನವಿದೆಯೇ? ಎಂದು ಪೀಠ ಹೇಳಿದೆ.
ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಾಮಾಜಿಕ ಕಾರ್ಯಕರ್ತ ವಿಷ್ಣು ಗುಪ್ತಾ ಈ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ತೀರ್ಪಿನ ನಂತರ ಗುಪ್ತಾ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡರು ಮತ್ತು ಲೆಫ್ಟಿನೆಂಟ್ ಗವರ್ನರ್ ಮುಂದೆ ಪ್ರಸ್ತುತಿ ಮಾಡುವುದಾಗಿ ಹೇಳಿದರು.