ಜೈಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸರ್ಕಾರ ಮಹಾನ್ ಚೇತನರಾದ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಕಡೆಗಣಿಸಿದ್ದು, ಇದೀಗ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿಯೂ ಅನಗತ್ಯವಾದ ವಿವಾದ ಸೃಷ್ಠಿಸುತ್ತಿದೆ ಕಿಡಿಕಾರಿದ್ದಾರೆ.
ವಿರೋಧ ಪಕ್ಷ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ್ ಸಿಂಗ್ ಅವರ ಸ್ಮಾರಕವನ್ನು ಭವಿಷ್ಯದಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡಿದೆಯೇ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದಿದ್ದಾರೆ.
ಈ ಹಿಂದೆ 2010ರಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಉಪ ರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಅವರ ಕುಟುಂಬದೊಂದಿಗೆ ಚರ್ಚಿಸಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿಕೊಡಲಾಗಿತ್ತು. ಅದರಂತೆಯೇ ಆ ಸ್ಥಳದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್ ಠಾಕ್ರೆ ನಿಧನರಾದಾಗಲೂ ಸಹ ಅವರ ಅಂತ್ಯಕ್ರಿಯೆಗಾಗಿ ಶಿವಾಜಿ ಪಾರ್ಕ್‌ನಲ್ಲಿ ವಿಶೇಷ ಸ್ಥಳವನ್ನು ನೀಡಿತ್ತು. ಕಾಂಗ್ರೆಸ್ ಪಕ್ಷ ಯಾವಾಗಳು ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯ ನೀಡುತ್ತದೆ. ಆದರೆ ಭಾರತದ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ವಿಚಾರದಲ್ಲಿ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂತಹ ವರ್ತನೆ ತೋರಿರುವುದು ದುರದೃಷ್ಣಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…