ದೇಶ- ವಿದೇಶ

ಮನಮೋಹನ್‌ ಸಿಂಗ್‌ ಸ್ಮಾರಕ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಅಶೋಕ್‌ ಗೆಹಲೋತ್‌ ವಾಗ್ದಾಳಿ

ಜೈಪುರ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೇಂದ್ರ ಸರ್ಕಾರ ಸರ್ಕಾರ ಮಹಾನ್‌ ಚೇತನರಾದ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆಯನ್ನು ಕಡೆಗಣಿಸಿದ್ದು, ಇದೀಗ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿಯೂ ಅನಗತ್ಯವಾದ ವಿವಾದ ಸೃಷ್ಠಿಸುತ್ತಿದೆ ಕಿಡಿಕಾರಿದ್ದಾರೆ.

ವಿರೋಧ ಪಕ್ಷ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ಮನಮೋಹನ್‌ ಸಿಂಗ್‌ ಅವರ ಸ್ಮಾರಕವನ್ನು ಭವಿಷ್ಯದಲ್ಲಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡಿದೆಯೇ ಹೊರತು ಬೇರೆ ಉದ್ದೇಶದಿಂದ ಅಲ್ಲ ಎಂದಿದ್ದಾರೆ.

ಈ ಹಿಂದೆ 2010ರಲ್ಲಿ ಕಾಂಗ್ರೆಸ್‌ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಜಿ ಉಪ ರಾಷ್ಟ್ರಪತಿ ಭೈರೋನ್‌ ಸಿಂಗ್‌ ಶೇಖಾವತ್‌ ನಿಧನರಾದಾಗ ಬಿಜೆಪಿಯ ಯಾವುದೇ ಬೇಡಿಕೆ ಇಲ್ಲದೇ ಅವರ ಕುಟುಂಬದೊಂದಿಗೆ ಚರ್ಚಿಸಿ ಜೈಪುರದಲ್ಲಿ ಅವರ ಅಂತ್ಯಕ್ರಿಯೆಗಾಗಿ ವಿಶೇಷ ಸ್ಥಳವನ್ನು ಮಂಜೂರು ಮಾಡಿಕೊಡಲಾಗಿತ್ತು. ಅದರಂತೆಯೇ ಆ ಸ್ಥಳದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ 2012ರಲ್ಲಿ ಬಾಳ್‌ ಠಾಕ್ರೆ ನಿಧನರಾದಾಗಲೂ ಸಹ ಅವರ ಅಂತ್ಯಕ್ರಿಯೆಗಾಗಿ ಶಿವಾಜಿ ಪಾರ್ಕ್‌ನಲ್ಲಿ ವಿಶೇಷ ಸ್ಥಳವನ್ನು ನೀಡಿತ್ತು. ಕಾಂಗ್ರೆಸ್‌ ಪಕ್ಷ ಯಾವಾಗಳು ಎಲ್ಲಾ ಪಕ್ಷಗಳ ನಾಯಕರಿಗೆ ಗೌರವಯುತ ವಿದಾಯ ನೀಡುತ್ತದೆ. ಆದರೆ ಭಾರತದ ಆರ್ಥಿಕ ತಜ್ಞ ಮನಮೋಹನ್‌ ಸಿಂಗ್‌ ಅವರ ವಿಚಾರದಲ್ಲಿ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂತಹ ವರ್ತನೆ ತೋರಿರುವುದು ದುರದೃಷ್ಣಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

17 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

17 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

18 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

18 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

19 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

19 hours ago