ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ.
ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಆಕಾಶವಾಣಿ ಕೇಂದ್ರ ಮುಂದುವರಿಯಲಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಪ್ರಸಾರ ಭಾರತಿ ಈ ಕ್ರಮಕ್ಕೆ ಮುಂದಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಮನೆ ಮಾತಾಗಿರುವ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಸಚಿವರು ಕೇಂದ್ರದ ಗಮನ ಸೆಳೆದಿದ್ದರು.
ಈ ಹಿನ್ನೆಲೆಯಲ್ಲಿ ಸಂಸದರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಪರ್ಕಿಸಿ ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಕೋರಿದ್ದರು. ಧಾರವಾಡ ಪ್ರಸಾರ ಭಾರತೀಯ ಕೇಂದ್ರದ ಕಾರ್ಯವ್ಯಾಪ್ತಿ ಮತ್ತು ಅದನ್ನು ಧಾರವಾಡದಲ್ಲಿಯೇ ಮುಂದುವರಿಸುವ ಅವಶ್ಯಕತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.
ಸಚಿವ ಪ್ರಹ್ಲಾದ್ ಜೋಶಿ ಮನವಿಗೆ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಪ್ರಸಾರ ಭಾರತಿಗೆ ಆದೇಶಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…