ಹೊಸದಿಲ್ಲಿ : ದುಬೈನಲ್ಲಿ ನಡೆಯಲಿರುವ ಏಷ್ಯಾಕಪ್‌ಗಾಗಿ ನಿಗದಿಯಾಗಿರುವ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಹಾಗೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಹಸಿರು ನಿಶಾನೆ ನೀಡಿದೆ.
ಸೆ. ೧೪ರಂದು ನಡೆಯಲಿರುವ ಏಷ್ಯಾ ಕಪ್ ಟಿ೨೦ ಟೂರ್ನಮೆಂಟ್‌ನ ಭಾರತ-ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರ ಪೀಠ ಅದನ್ನು ಗಂಭೀರವಾಗಿ ಪರಿಗಣಿಸಲು ನಿರಾಕರಿಸಿತು. ನ್ಯಾಯಮೂರ್ತಿ ಮಹೇಶ್ವರಿ ಇದರಲ್ಲಿ ಆತುರ ಏನಿದೆ? ಇದು ಕೇವಲ ಒಂದು ಪಂದ್ಯ, ನಡೆಯಲಿ ಬಿಡಿ ಎಂದು ಹೇಳಿದರು.
ಅರ್ಜಿದಾರರು ಸರ್ವೋಚ್ಚ ನ್ಯಾಯಾಲಯದ ಬಳಿ ಬೇಗ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದರು. ನ್ಯಾಯಾಲಯದ ಬಳಿ ಪಂದ್ಯ ಭಾನುವಾರ ಇದೆ, ಆದ್ದರಿಂದ ಬೇಗ ವಿಚಾರಣೆ ನಡೆಸಬೇಕು ಎಂದು ಹೇಳಲಾಗಿತ್ತು. ನ್ಯಾಯಮೂರ್ತಿ ಮಹೇಶ್ವರಿ ತಮ್ಮ ಅಭಿಪ್ರಾಯ ತಿಳಿಸಿ ಪಂದ್ಯ ಭಾನುವಾರವಿದ್ದರೆ ನಾವು ಏನು ಮಾಡಬೇಕು, ಪಂದ್ಯ ನಡೆಯಲಿ ಬಿಡಿ ಎಂದು ಹೇಳಿದರು.
ಏಷ್ಯಾ ಕಪ್ ಟಿ೨೦ ಲೀಗ್‌ನ ಭಾಗವಾಗಿ ಸೆ. ೧೪ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ೨೦ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಲು ತಕ್ಷಣ ನಿರ್ದೇಶನಗಳನ್ನು ಕೋರಿ, ಉರ್ವಶಿ ಜೈನ್ ಸೇರಿದಂತೆ ನಾಲ್ವರು ಕಾನೂನು ವಿದ್ಯಾರ್ಥಿಗಳು ಸಂವಿಧಾನದ ೩೨ ನೇ ವಿಽಯ ಅಡಿಯಲ್ಲಿ ಈ ಪಿಐಎಲ್ ಅನ್ನು ಸಲ್ಲಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತೀಯ ನಾಗರಿಕರು ಮತ್ತು ಸೈನಿಕರು ತಮ್ಮ ಪ್ರಾಣ ತ್ಯಾಗ ಮಾಡಿದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯವನ್ನು ಆಯೋಜಿಸುವುದು ರಾಷ್ಟ್ರೀಯ ಘನತೆ ಮತ್ತು ಸಾರ್ವಜನಿಕ ಭಾವನೆಗೆ ಅಸಮಂಜಸವಾದ ಸಂದೇಶವನ್ನು ರವಾನಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಭಯೋತ್ಪಾದನೆಯನ್ನು ಆಶ್ರಯಿಸುವ ರಾಷ್ಟ್ರದೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಸಶಸ್ತ್ರ ಪಡೆಗಳ ನೈತಿಕತೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಹುತಾತ್ಮರ ಮತ್ತು ಭಯೋತ್ಪಾದನೆಯ ಬಲಿಪಶುಗಳ ಕುಟುಂಬಗಳಿಗೆ ದುಃಖವನ್ನುಂಟು ಮಾಡುತ್ತದೆ. ಕ್ರಿಕೆಟ್ ಅನ್ನು ರಾಷ್ಟ್ರೀಯ ಹಿತಾಸಕ್ತಿ ಮತ್ತು ದೇಶದ ಜನರ ಜೀವನ ಮತ್ತು ಸೈನ್ಯದ ನಿಷ್ಠೆ ಮತ್ತು ತ್ಯಾಗಕ್ಕಿಂತ ಹೆಚ್ಚಾಗಿ ಇರಿಸಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…