Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕ್ ಧ್ವಜ ಬಳಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್‌

ಬೆಂಗಳೂರು: ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್‌ ಹನುಮಕ್ಕನವರ್‌ ನಿರ್ವಹಿಸುತ್ತಿದ್ದರು.

ಈ ವರದಿಯನ್ನು ಆಲ್ಟ್‌ ನ್ಯೂಸ್‌ ಸಹ ಸಂಪಾದಕ ಮಹಮ್ಮದ್‌ ಝುಬೇರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.

ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್‌, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಮುಸ್ಲಿಂರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ವರದಿ ನೀಡಿತ್ತು. ಇದೇ ವಿಷಯ ಸಂಬಂಧ ಕನ್ನಡ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್‌ ವರದಿ ಬಿತ್ತರಿಸುವಾಗ ಮುಸ್ಲಿಮರಿಗೆ ಪಾಕಿಸ್ತಾನ ಧ್ವಜ ಬಳಸಿರುವುದು ವರದಿಯಾಗಿತ್ತು.

Tags: