ಬೆಂಗಳೂರು: ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಕನ್ನಡದ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ತನ್ನ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿತ್ತು. ಈ ಕಾರ್ಯಕ್ರಮವನ್ನು ಅಜಿತ್ ಹನುಮಕ್ಕನವರ್ ನಿರ್ವಹಿಸುತ್ತಿದ್ದರು.
ಈ ವರದಿಯನ್ನು ಆಲ್ಟ್ ನ್ಯೂಸ್ ಸಹ ಸಂಪಾದಕ ಮಹಮ್ಮದ್ ಝುಬೇರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಆಕ್ರೋಶ ಹೊರ ಹಾಕಿದ್ದರು.
ಈ ಬಗ್ಗೆ ಎಲ್ಲೆಡೆ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗತ್ತಿರುವ ಬೆನ್ನಲ್ಲೇ ಚಾನೆಲ್, “ಇದೊಂದು ದುರುದ್ದೇಶ ಇಲ್ಲದ, ಕಣ್ತಪ್ಪಿನಿಂದ ಆದ ಅಚಾತುರ್ಯವಾಗಿದ್ದು, ಈ ಪ್ರಮಾದಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.
ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಮುಸ್ಲಿಂರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ವರದಿ ನೀಡಿತ್ತು. ಇದೇ ವಿಷಯ ಸಂಬಂಧ ಕನ್ನಡ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ವರದಿ ಬಿತ್ತರಿಸುವಾಗ ಮುಸ್ಲಿಮರಿಗೆ ಪಾಕಿಸ್ತಾನ ಧ್ವಜ ಬಳಸಿರುವುದು ವರದಿಯಾಗಿತ್ತು.
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…