ದೇಶ- ವಿದೇಶ

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಭಾನುವಾರ ನೌಬೋಯಿಚಾ (ಉತ್ತರ ಲಖಿಂಪುರ ಜಿಲ್ಲೆ)ಯಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ, ಐದು ಗ್ಯಾರಂಟಿಗಳನ್ನು ಪ್ರಕಟಿಸಿದರು.

ಮಹಿಳಾ ಕಲ್ಯಾಣ, ಆರೋಗ್ಯ ಸೇವೆ, ಭೂಮಿ ಹಕ್ಕು ಹಾಗೂ ಜುಬೀನ್‌ ಗಾರ್ಗ್‌ ಸಾವಿನ ಪ್ರಕರಣದಲ್ಲಿ ನ್ಯಾಯ ಒದಗಿಸುವ ಭರವಸೆ ಸೇರಿದಂತೆ ಐದು ಗ್ಯಾರಂಟಿಗಳನ್ನು ಅವರು ಘೋಷಿಸಿದರು.

ಈ ಐದು ಗ್ಯಾರಂಟಿಗಳು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ತಕ್ಷಣ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ ಅವರು, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರ ಮತ್ತು ಭಯದ ವಾತಾವರಣವನ್ನು ತೀವ್ರವಾಗಿ ಟೀಕಿಸಿದರು.

ಅಸ್ಸಾಂ ವಿಧಾನಸಭಾ ಚುನಾವಣೆ ಏಪ್ರಿಲ್ 9 ರಂದು ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

2 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

2 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

2 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

2 hours ago

ಹುಲ್ಲಹಳ್ಳಿ | ಚಿರತೆ ದಾಳಿಗೆ ಎರಡು ಮೇಕೆ ಬಲಿ

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು…

3 hours ago